

ಬಸವಕಲ್ಯಾಣ: ಹಿರಿಯ ಪತ್ರಿಕಾ ವಿತರಕ ಸಂಗ್ರಾಮಪ್ಪ ಪಾಟೀಲ್ ಅವರ ಪುತ್ರಿ ಆಶಾ ಪಾಟೀಲ್ ರಾಯಚೂರು ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆದು ಸಾಧನೆ ಮೆರೆದಿದ್ದಾರೆ. ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ಎಂಎಸ್ಸಿ (ಅಗ್ರಿ) ಮಣ್ಣು ವಿಜ್ಞಾನ ಮತ್ತು ರಸಾಯನ ಶಾಸ್ತ ವಿಷಯದಲ್ಲಿ ಪ್ರಥಮ ಸ್ಥಾನ ಪಡೆದ ಆಶಾಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಚಿನ್ನದ ಪದಕ ಹಾಗೂ ಪದವಿ ಪ್ರಮಾಣಪತ್ರ ನೀಡಿ ಅಭಿನಂದಿಸಿದರು. ವಿಜಯಪುರ ಕೃಷಿ ವಿದ್ಯಾಲಯದಲ್ಲಿ ಬಿಎಸ್ಸಿ ಅಗ್ರಿ ಮುಗಿಸಿರುವ ಆಶಾ, ಸ್ನಾತಕೋತ್ತರ ಪದವಿಯನ್ನು ರಾಯಚೂರು ಕೃಷಿ ವಿವಿಯಲ್ಲಿ ವ್ಯಾಸಂಗ ಮಾಡಿ ಮಣ್ಣು ವಿಜ್ಞಾನ ಮತ್ತು ರಸಾಯನ ಶಾಸ್ತç ವಿಷಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.