

ಬೆಳಗಾವಿ: ನಗರದ ತಿಲಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು 8.30 ಲ ರೂ. ಮೌಲ್ಯದ ಚಿನ್ನಾಭರಣ,ಬೈಕ್, ಮೊಬೈಲ್ ಸೇರಿ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಸಾವರಕರ ರಸ್ತೆಯ ಒಂದು ಮನೆಯಲ್ಲಿ ಮತ್ತು ಹಿಂದವಾಡಿಯಲ್ಲಿರುವ ಅಮಿತ ಡಿಲೆಕ್ಸ್ ಲಾಡ್ಜಿಂಗ್ನಲ್ಲಿ ಕಳ್ಳತನವಾದ ಬಗ್ಗೆ ಪ್ರಕರಣಗಳು ದಾಖಲಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ತಿಳಕವಾಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪರಶುರಾಮ ಪೂಜೇರಿ ನೇತೃತ್ವದ ಅಧಿಕಾರಿ ಮತ್ತು ಸಿಬ್ಬಂದಿ ಎರಡೂ ಕಳ್ಳತನ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖೆ ಮುಂದುವರಿಸಿದ್ದಾರೆ.