Gold, Silver Price; ದುಬಾರಿಯಾಗ್ತಿದೆ ಚಿನ್ನ.. ಈಗ ಎಷ್ಟಿದೆ ನೋಡಿ ಚಿನ್ನ-ಬೆಳ್ಳಿ ದರ

gold
Published on

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,500 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,640ರೂ.

ಬೆಳ್ಳಿ ಬೆಲೆ 1 ಕೆಜಿ: 73,000 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ,

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 56,400 ರೂಪಾಯಿ ಇತ್ತು. ಆದರೆ ಇಂದು 56,500 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 100 ರೂಪಾಯಿ ಏರಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 61.530 ರೂಪಾಯಿ ಇತ್ತು. ಆದರೆ ಇಂದು 61.640 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 110 ರೂಪಾಯಿ ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು: 56,500 ರೂ.

ಮುಂಬೈ: 56,500 ರೂ.

ದೆಹಲಿ: 61,790 ರೂ.

ಕೇರಳ: 56,400 ರೂ.

ಅಹ್ಮದಾಬಾದ್: 56,450 ರೂ

ಜೈಪುರ್: 56,550 ರೂ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net