

ಮಂಗಳೂರು: ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿರುವ ಪ್ರಕರಣವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ 18,95,400 ಲಕ್ಷ ರೂ. ಮೌಲ್ಯದ 364.500 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಸ್ಪೈಸ್‌ಜೆಟ್ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಭಟ್ಕಳ ಮೂಲಕ ಪ್ರಯಾಣಿಕ ತನ್ನೊಂದಿಗೆ ಬಾಕ್ಸ್‌ನಲ್ಲಿ ಇದ್ದ ಒಳಉಡುಪಿಗೆ ಪೇಪರ್ ಮಾದರಿಯಲ್ಲಿ ಚಿನ್ನವನ್ನು ಅಳವಡಿಸಿ ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ.
ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ. ಈ ಬಗ್ಗೆ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.