ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1 ಕೆಜಿ ಚಿನ್ನ ವಶಕ್ಕೆ

Published on

ಬೆಳಗಾವಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1 ಕೆ.ಜಿ. ಚಿನ್ನವನ್ನು ಮೂಡಲಗಿ ವ್ಯಾಪ್ತಿಯ ಹಳ್ಳೂರು ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಬುಧವಾರ ಸಂಜೆ ವಶಕ್ಕೆ ಪಡೆದುಕೊಂಡಿದ್ದಾರೆ.
 ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಿಂದ ಬೆಳಗಾವಿಗೆ ಕಾರಿನಲ್ಲಿ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದಾಗ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. 60.47 ಲಕ್ಷ ರೂ. ಮೌಲ್ಯದ 1,025 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಪೊಲೀಸರು ಮಾಹಿತಿ ನೀಡಲಾಗಿದ್ದು, ತನಿಖೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net