

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ 10,55,580 ರೂ. ಮೌಲ್ಯದ 219 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡಿನ ಹುಸೈನ್ ರಾಝಿ ಮೊಯ್ದೀನ್ ಅಬೂಬಕ್ಕರ್(26) ಆರೋಪಿ. ಈತ ಕಿಚನ್ ಟಾಯ್‌ಸೆಟ್‌ನ ಒಳಗಿಟ್ಟು ಚಿನ್ನ ಸಾಗಾಟ ಮಾಡುತ್ತಿದ್ದ.
ದುಬೈಯಿಂದ ಆಗಮಿಸಿದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದ್ದ ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ 24 ಕ್ಯಾರೆಟ್ ಶುದ್ಧ ಚಿನ್ನ ಅಕ್ರಮ ಸಾಗಾಟ ಮಾಡಿರುವುದು ಪತ್ತೆಯಾಗಿದೆ. ಭಾನುವಾರ ದುಬೈಯಿಂದ ಆಗಮಿಸಿದ ಪ್ರಯಾಣಿಕನಲ್ಲಿ 5.58 ಲಕ್ಷ ರೂ. ಮೌಲ್ಯದ 116 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದರು.