13.2ಲಕ್ಷ ರೂ. ಮೌಲ್ಯದ ಚಿನ್ನ ವಶ

gold
Published on

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 13.2 ಲಕ್ಷ ರೂ. ಮೌಲ್ಯದ 262 ಗ್ರಾಂ ಚಿನ್ನ ಅಕ್ರಮ ಸಾಗಾಟವನ್ನು ಪತ್ತೆಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ಮುಂಜಾನೆ ದುಬೈನಿಂದ ಆಗಮಿಸಿದ ಭಟ್ಕಳ ಮೂಲದ ಸಿದ್ದಿಕ್ ಮಿಕ್ದಂ ಹುಸೈನ್(27) ಬಂಧಿತ ಆರೋಪಿ. ಗುಪ್ತಚರ ಮಾಹಿತಿ ಮೇರೆಗೆ ಆತನನ್ನು ವಿಚಾರಣೆಗೆ ಒಳಪಡಿಸಿ, ತಪಾಸಣೆ ನಡೆಸಿದಾಗ ಆತನ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿದ್ದ 24 ಕ್ಯಾರೆಟ್ ಶುದ್ಧತೆಯ ಚಿನ್ನ ಪತ್ತೆಯಾಗಿದೆ.

ಕಸ್ಟಮ್ಸ್ ಉಪ ಆಯುಕ್ತ ಪ್ರವೀಣ್ ಕಂಡಿ ನೇತೃತ್ವದಲ್ಲಿ ಸಪರಿಂಟೆಂಡೆಂಟ್ ಅಧಿಕಾರಿಗಳಾದ ರಾಕೇಶ್ ಕುಮಾರ್, ಸತೀಶ್ ಕುಮಾರ್, ಇನ್ಸ್‌ಪೆಕ್ಟರ್ ಸಂದೀಪ್ ಹಾಗೂ ಇತರ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net