ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ

New Project (2)
Published on

ಕಡಬ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹತ್ತನೇ ತರಗತಿ ವಿದ್ಯಾರ್ಥಿನಿ ರಕ್ಷಾ ಡಿ. ವಿಶಿಷ್ಟ ಸಾಧನೆ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.

ತನ್ನ ಕೈಯನ್ನು ಸೊಂಟದಲ್ಲಿ ಹಿಡಿದು ನಿಮಿಷಕ್ಕೆ 179 ಸಲ ಮುಂಗೈಯನ್ನು ಹಿಂದಕ್ಕೆ ಹಾಗೂ ಮುಂದಕ್ಕೆ ಮುಟ್ಟಿಸುವುದರ ಮೂಲಕ ಅತ್ಯಂತ ಕ್ಲಿಷ್ಟಕರ ಸಾಧನೆಗೈದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ್ದಾರೆ. ಈಗಾಗಲೇ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಪ್ರಶಸ್ತಿ ಹಾಗೂ ಪದಕ ಪಡೆದಿದ್ದಾರೆ. ಈಕೆ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅದಮ ನಿವಾಸಿ ಧರ್ಣಪ್ಪ ಪೂಜಾರಿ ಮತ್ತು ವನಿತಾ ದಂಪತಿಯ ಪುತ್ರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net