ಸುವರ್ಣ ಮಹೋತ್ಸವ ಸಮಾರಂಭ ಇಂದು

IMG-20241206-WA0126
Published on

ಸಾಲಿಗ್ರಾಮ: ಪಟ್ಟಣದ ಎಸ್‌ಸಿ ಎಜುಕೇಶನ್ ಲೀಗ್ ವಿದ್ಯಾ ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭವನ್ನು ಡಿ.7ರಂದು ಪಟ್ಟಣದಲ್ಲಿ ಆಯೋಜಿಸಲಾಗಿದೆ ಎಂದು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಎಂ.ಚನ್ನಮಲ್ಲಯ್ಯ ಹೇಳಿದರು.

ಪಟ್ಟಣದ ಶ್ರೀ ಚನ್ನಕೇಶವ ಸ್ವಾಮಿ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದರು.

ಡಿ.7ರ ಶನಿವಾರ ಸಾಲಿಗ್ರಾಮ ಪಟ್ಟಣದ ಚೆನ್ನಕೇಶವ ವಿದ್ಯಾಸಂಸ್ಥೆ ಆವರಣದಲ್ಲಿ ಬೆಳಗ್ಗೆ 11ಗಂಟೆಗೆ ಸಂಸ್ಥೆಯ ಸುವರ್ಣ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ದೇವಲಾಪುರದ ಅಮ್ಮ ವಸುಂದರೇ ಕಲಾತಂಡ, ಪಟ್ಟಣದ ಸರಿಗಮಪ ಮೆಲೋಡಿಸ್, ಮೈಸೂರಿನ ತರು ಮ್ಯೂಸಿಕಲ್ ಇವೆಂಟ್ಸ್ ತಂಡಗಳಿಂದ ಗೀತ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ವಿದ್ಯಾ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದ ಸಾನ್ನಿಧ್ಯವನ್ನು ಉರಿಲಿಂಗಿ ಪೆದ್ದೀಶ್ವರ ಶಾಖಾಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ವಹಿಸುವರು. ಶಾಸಕ ಡಿ.ರವಿಶಂಕರ್, ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಮಾಜಿ ಸಚಿವ ಸಾ.ರಾ.ಮಹೇಶ್, ಎಸ್ ಸಿಈಎಲ್ ವಿದ್ಯಾಸಂಸ್ಥೆಯ ಅಧ್ಯಕ್ಷೆ ನಾಗರತ್ನಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ವಿದ್ಯಾಸಂಸ್ಥೆಯ ನಿರ್ದೇಶಕ ಎಸ್.ಕೆ.ಹೊನ್ನಪ್ಪ, ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪಿ.ಉಮೇಶ್, ಪ್ರೌಢಶಾಲಾ ಮುಖ್ಯಶಿಕ್ಷಕ ಎಸ್.ಸಿ.ಗೋವಿಂದರಾಜು, ಉಪನ್ಯಾಸಕರಾದ ಮಂಜುನಾಥ್, ರಂಜಿತಾ, ಶಿಕ್ಷಕ ಪ್ರವೀಣ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net