ಕಾಲಭೈರವೇಶ್ವರಸ್ವಾಮಿಗೆ ಸುವರ್ಣ ಕವಚ ಅಲಂಕಾರ

 ಕಾಲಭೈರವೇಶ್ವರ ಸ್ವಾಮಿ ಮತ್ತು ಸ್ವಾಮೀಜಿ ಅವರ ಉತ್ಸವವನ್ನು ಭಕ್ತರು ಪ್ರಮುಖ ಬೀದಿಗಳಲ್ಲಿ ನಡೆಸಿದರು.
ಕಾಲಭೈರವೇಶ್ವರ ಸ್ವಾಮಿ ಮತ್ತು ಸ್ವಾಮೀಜಿ ಅವರ ಉತ್ಸವವನ್ನು ಭಕ್ತರು ಪ್ರಮುಖ ಬೀದಿಗಳಲ್ಲಿ ನಡೆಸಿದರು.
Published on

ನಾಗಮಂಗಲ: ಆದಿಚುಂಚನಗಿರಿಯಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಮಂಗಳವಾರ ಶ್ರೀ ಕಾಲಭೈರವೇಶ್ವರಸ್ವಾಮಿಗೆ ಸುವರ್ಣ ಕವಚ ಅಲಂಕಾರ ಮತ್ತು ಶ್ರೀ ಗಂಗಾಧರೇಶ್ವರ ಸ್ವಾಮಿಗೆ ರಜತ ನಾಗಾಭರಣ ಅಲಂಕಾರದೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಪೂಜೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಸಂಜೆ ಕಾಲಭೈರವೇಶ್ವರಸ್ವಾಮಿಗೆ ಹೂವಿನ ಪಾಲಕಿ ಉತ್ಸವ ಮತ್ತು ಸ್ವಾಮೀಜಿ ಅವರ ಮುತ್ತಿನ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ನಡೆಯಿತು. ಕಾಲಭೈರವೇಶ್ವರ ಸ್ವಾಮಿ ಮತ್ತು ಸ್ವಾಮೀಜಿ ಅವರ ಉತ್ಸವವನ್ನು ಭಕ್ತರು ಪ್ರಮುಖ ಬೀದಿಗಳಲ್ಲಿ ನಡೆಸಿದರು. ಕಾಲಭೈರವೇಶ್ವರ ಮತ್ತು ಗಂಗಾಧರೇಶ್ವರಸ್ವಾಮಿ ದೇವಾಲಯವನ್ನು ಬಣ್ಣಬಣ್ಣದ ಹೂವುಗಳು ಮತ್ತು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net