ಪರಿಶಿಷ್ಟ ಜಾತಿ ಯುವಕರಿಗೆ ಸುವರ್ಣ ಅವಕಾಶ, ಫಿಟ್ನೆಸ್ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

application
Published on

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಕರಿಗೆ 15 ದಿನಗಳ ಕಾಲ ಜಿಮ್‌ಫಿಟ್ನೆಸ್ ತರಬೇತಿ ಶಿಬಿರ ಆಯೋಜಿಸಲಾಗಿದೆ.

ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಟಿಯಿಂದ ಪರಿಶಿಷ್ಟ ಜಾತಿಯ 16 ರಿಂದ 30 ವರ್ಷದೊಳಗಿನ ಯುವಕರಿಗೆ ಈ ತರಬೇತಿ ಆಯೋಜಿಸಲಾಗಿದೆ. ಜ.24 ರಿಂದ ಫೆ.7 ರವರೆಗೆ ತರಬೇತಿ ನಡೆಯಲಿದೆ.

ಅರ್ಜಿಗಳನ್ನು ಭರ್ತಿ ಮಾಡಿ ಜ.7ರ ಒಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಾಮುಂಡಿ ವಿಹಾರ ಕ್ರೀಡಾಂಗಣ, ನಜರ್‌ಬಾದ್, ಮೈಸೂರು ಇಲ್ಲಿಗೆ ಸಲ್ಲಿಸಬೇಕು. ವಿವರಗಳಿಗೆ ದೂರವಾಣಿ ಸಂಖ್ಯೆ 0821-2564179 ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net