ಸುವರ್ಣಸೌಧಕ್ಕೆ ಕಚೇರಿ ಸ್ಥಳಾಂತರಿಸಿ

30_bgv_manju_2_suvarna Soudha
Published on

ಬೆಳಗಾವಿ: ಮೂರು ತಿಂಗಳಿಗೊಮ್ಮೆ ಇಲ್ಲಿಯ ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಸುವುದು, ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸುವರ್ಣಸೌಧ ಉತ್ತರ ಕರ್ನಾಟಕದ ಅಭಿವೃದ್ಧಿಗೆ ದಿಕ್ಸೂಚಿಯಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ರಾಜ್ಯಮಟ್ಟದ ಕಚೇರಿ ಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರಿಸಬೇಕು.

ಸುವರ್ಣಸೌಧದ ಎದುರು ವೀರರಾಣಿ ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ಒತ್ತಾಯಿಸಿದರು. ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ರಾಜ್ಯ ಸಂಚಾಲಕ ಮಹಾದೇವ ತಳವಾರ, ಸುರೇಶ ಗವಣ್ಣವರ, ಗಣೇಶ ರೋಕಡೆ, ಬಾಳು ಜಡಗಿ, ಹೊಳೆಪ್ಪಗೋಳ, ಶಿವಾನಂದ ತಂಬಾಕಿ, ರಮೇಶ ಯರಗಣ್ಣವರ, ವಿನಾಯಕ ಭೋವಿ, ಕಿರಣ ಮಾಳಣ್ಣವರ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net