ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಮೂವರ ಬಂಧನ

VJP 9-4
Published on

ವಿಜಯಪುರ: ಕಾರ್‌ನಲ್ಲಿ ಕುಳಿತು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ನಗರದ ಸಿಂದಗಿ ನಾಕಾ ಬಳಿ ಪೊಲೀಸರು ದಾಳಿ ನಡೆಸಿದ್ದು, ಸ್ಥಳೀಯ ನಿವಾಸಿಗಳಾದ ಸಚಿನ್ ಪವಾರ, ದಿಲೀಪ್ ಬಿರಂಗಿ, ಜಾವೇದ್ ಹಸನ್‌ಸಾಬ್ ಅವರನ್ನು ಬಂಧಿಸಿದ್ದಾರೆ.
ಬಂಧಿತರಿಂದ 64,900 ರೂ., 11 ಮೊಬೈಲ್, ಒಂದು ಡಸ್ಟರ್ ಕಾರ್, ಲ್ಯಾಪ್‌ಟಾಪ್ ಜಪ್ತಿ ಮಾಡಿಕೊಳ್ಳಲಾಗಿದೆ. ಗೋಳಗುಮ್ಮಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net