ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲಗೆ ಮನವಿ

Maski Golla Community Appea
ಗೊಲ್ಲ ಸಮುದಾಯದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ ಮೂಲಕ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಮಾಜಿ ಶಾಸಕ ಪ್ರತಾಪಗೌಡ ಪಾಟೀಲಗೆ ಸೋಮವಾರ ಸಲ್ಲಿಸಿದರು.
Published on

ಮಸ್ಕಿ: ಗೊಲ್ಲ ಸಮುದಾಯದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ ಮೂಲಕ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಮಾಜಿ ಶಾಸಕ ಪ್ರತಾಪಗೌಡ ಪಾಟೀಲಗೆ ಸೋಮವಾರ ಸಲ್ಲಿಸಿದರು.

ಕಲ್ಯಾಣ ಕರ್ನಾಟಕದಲ್ಲಿ ಗೊಲ್ಲ ಸಮುದಾಯದ ಜನಸಂಖ್ಯೆ ಹೆಚ್ಚಾಗಿದ್ದು, ಅದರಲ್ಲಿ ಮಸ್ಕಿ ಕ್ಷೇತ್ರದಲ್ಲಿ 25 ಸಾವಿರ ಜನಸಂಖ್ಯೆ ಹೊಂದಿದ್ದು, ಕ್ಷೇತ್ರದ ಪ್ರತಿ ಚುನಾವಣೆಯಲ್ಲಿ ಗೊಲ್ಲ ಸಮುದಾಯ ಮತದಾರರು ನಿರ್ಣಾಯಕರಾಗಿರುತ್ತಾರೆ. ಆದರಿಂದ ಈ ಸಮುದಾಯಕ್ಕೆ ಸಂವಿಧಾನಬದ್ಧವಾಗಿ ಮೂಲಸೌಕರ್ಯ ಒದಗಿಸಬೇಕೆಂದು ಒತ್ತಾಯಿಸಿದರು.

ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂ., ಅನುದಾನ ಮೀಸಲಿಡಬೇಕು, ಕಲ್ಯಾಣ ಕರ್ನಾಟಕ ಕುಲಶಾಸ್ತ್ರ ಅಧ್ಯಯನ ಮಾಡಲು ಅನುಮತಿ ನೀಡಬೇಕು, ಹಟ್ಟಿ ಗೊಲ್ಲ ಪ್ರಮಾಣ ಪತ್ರ ನೀಡಬೇಕು, ಗೊಲ್ಲರಹಟ್ಟಿಯನ್ನು ಕಂದಾಯ ಗ್ರಾಮವನ್ನಾಗಿಸಬೇಕು, ಗೊಲ್ಲ ಸಮುದಾಯದ ಭೂ ರಹಿತ ಕುಟುಂಬಗಳನ್ನು ಗುರುತಿಸಿ ಪ್ರತಿ ಕುಟುಂಬಕ್ಕೆ 2 ಎಕರೆ ಜಮೀನು ನೀಡಬೇಕು. ಗೊಲ್ಲ ಸಮುದಾಯಕ್ಕೆ ಧನ-ಕುರಿ ಶೇಡ್ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡಬೇಕು, ಗೊಲ್ಲರ ಹಟ್ಟಿಗಳಲ್ಲಿ ಗೋ ಶಾಲೆ ಆರಂಭಿಸಬೇಕೆಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net