

ಬೆಳ್ತಂಗಡಿ: ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ ಅವರ ಮಾರ್ಗದರ್ಶನದೊಂದಿಗೆ, ನೀಲೇಶ್ವರ ಪದ್ಮನಾಭ ತಂತ್ರಿ ನೇತೃತ್ವದಲ್ಲಿ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ತೋರಣ ಮುಹೂರ್ತ, ಧ್ವಜಾರೋಹಣ, ಅನ್ನಸಂತರ್ಪಣೆ ನಡೆಯಿತು.
ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಾಬು ಗೌಡ ಮಡ್ಯಲಕಂಡ, ಸಮಿತಿ ಸದಸ್ಯರಾದ ವೆಂಕಟ್ರಮಣ ಗೌಡ ಬಾಳೆಹಿತ್ತಿಲು, ದಮಯಂತಿ ಪಾಂಜಾಳ, ಲಕ್ಷಣ ನಾಯ್ಕ ಮುಂಡೂರು, ನಿರಂಜನ ಗೌಡ ನಡುಮಜಲು, ಶರತ್ ಮುರ್ತಾಜೆ, ಯಕ್ಷಗಾನ ಸಮಿತಿ ಅಧ್ಯಕ್ಷರಾದ ಹರೀಶ್ ಹೊಳ್ಳ ಕಲ್ರೋಡಿ, ಪ್ರಮುಖರಾದ ಗೋಪಾಲಕೃಷ್ಣ ಹೊಳ್ಳ ಕಲ್ರೋಡಿ, ಬಂದಾರು ಗ್ರಾಪಂ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ನಿರ್ದೇಶಕ ಪ್ರಸಾದ್ ಗೌಡ ಅಂಡಿಲ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಅಧ್ಯಕ್ಷ ಸುಂದರ ಪೂಜಾರಿ, ಮಾಜಿ ತಾಪಂ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಜಾತ್ರೋತ್ಸವ ಸಮಿತಿ ಕಾರ್ಯದರ್ಶಿ ಭರತ್ ಗೌಡ, ಅರ್ಚಕರಾದ ಭೀಮ್ ಭಟ್ ಹಾಗೂ ಸಮಿತಿ ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.