

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ಜ.೧೫ ರಂದು ಗೋಣಿಕೊಪ್ಪದಲ್ಲಿ ಸೇನಾ ದಿವಸ ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಕೊಟ್ಟುಕತ್ತೀರ ಪಿ. ಸೋಮಣ್ಣ ಹೇಳಿದ್ದಾರೆ.
ಗೋಣಿಕೊಪ್ಪ ಕಾವೇರಿ ಕಾಲೇಜು ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್. ತಿಮ್ಮಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದೆಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಕಾರ್ಯ ಕ್ರಮದಲ್ಲಿ ಮಾಜಿ ಸೈನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟ, ವೈದ್ಯಕೀಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆದಿದೆ. ನಮ್ಮ ಕಚೇರಿ ಕಟ್ಟಡಕ್ಕೆ ನಿವೇಶನ ಒದಗಿಸುವುದಾಗಿ ಸಮಾಜ ಸೇವಕ ನಾಪಂಡ ಮುತ್ತಪ್ಪ ಭರವಸೆ ನೀಡಿದ್ದಾರೆಂದು ಮಾಹಿತಿ ನೀಡಿದರು.
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದಿಂದ ನೀಡುವ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಪ್ರಶಸ್ತಿಗೆ ಕೊಡಗಿನಿಂದ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಪ್ರಗತಿಪರ ಕೃಷಿಕ ಸೋಮೆಂಗಡ ಗಣೇಶ್ ತಿಮ್ಮಯ್ಯ, ಚಲನಚಿತ್ರ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ೧೩೨ ಪದಕ ವಿಜೇತ ಹೊಸೊಕ್ಲು ಚಿಣ್ಣಪ್ಪ, ೩೩ ಚಿನ್ನದ ಪದಕ ವಿಜೇತ ತಂಬಂಡ ನಾಣಯ್ಯ ಹೆಸರು ಶಿಫಾರಸ್ಸು ಮಾಡಲಾಗಿದೆ ಎಂದರು.
ಸಂಘದ ಉಪಾಧ್ಯಕ್ಷ ಸನಿಲ್ ಸುಧೀರ್, ಸಂಚಾಲರಕಾದ ಸಿ.ಜಿ. ತಿಮ್ಮಯ್ಯ, ಬೊಜ್ಜಂಗಡ ಸುನೀಲ್, ವಾಸು, ಅಪ್ಪಚ್ಚಿರ ನೀಲಮ್ಮ ಗೋಷ್ಠಿ ಯಲ್ಲಿದ್ದರು.