

ಕೊಡಗು : ಚಾಮುಂಡೇಶ್ವರಿ ದೇವಿಯ ಪ್ರತಿಷ್ಠಾಪನೆಯ ಮೂಲಕ ಗೋಣಿಕೊಪ್ಪಲು ದಸರಾ ಉತ್ಸವಕ್ಕೆ ಚಾಲನೆ ದೊರೆತಿದೆ..
ಗೋಣಿಕೊಪ್ಪ ಇಲ್ಲಿನ ಸ್ವಾತಂತ್ರೃ ಹೋರಾಟಗಾರರ ಭವನದಲ್ಲಿ ಶನಿವಾರ ಬೆಳಗ್ಗೆ ವಿವಿಧ ಪೂಜಾ ಕೈಂಕರ್ಯ ನೆರವೇರಿಸಿ ದೇವಿಯ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಲಾಯಿತು.
ಕ್ಷೇತ್ರದ ಶಾಸಕ ಹಾಗೂ ಕಾವೇರಿ ದಸರಾ ಸಮಿತಿ ಗೌರವಾಧ್ಯಕ್ಷ ಎ.ಎಸ್.ಪೊನ್ನಣ್ಣ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು. ಶ್ರೀ ಕಾವೇರಿ ದಸರಾ ಸಮಿತಿ ಅಧ್ಯಕ್ಷ ಪ್ರಮೋದ್ ಗಣಪತಿ, ದಸರಾ ಸಮಿತಿಯ ಕಾರ್ಯಾಧ್ಯಕ್ಷೆ ಸೌಮ್ಯಾ ಬಾಲು, ಪ್ರಧಾನ ಕಾರ್ಯದರ್ಶಿ ಕಂದಾದೇವಯ್ಯ, ಕಾವೇರಿ ದಸರಾ ಸಮಿತಿ ಮಾಜಿ ಅಧ್ಯಕ್ಷ ಬಿ.ಎನ್.ಪ್ರಕಾಶ್, ರಾಮಕೃಷ್ಣ, ಬೋಪ್ಪಣ್ಣ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶ್ರಿ ಉಮಾಮಹೇಶ್ವರಿ ದೇವಾಲಯದ ಮುಖ್ಯ ಅರ್ಚಕ ಶಂಕರ ವೈಲಯ ತಂಡ ಪೂಜಾ ಕೈಂಕರ್ಯ ನೆರವೇರಿಸಿದರು.