

ಸೊರಬ: ಕ್ರೀಡಾಕೂಟಗಳಲ್ಲಿನ ಸೋಲು, ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಿ ಕ್ರೀಡಾ ಮನೋಭಾವವನ್ನು ವೃದ್ಧಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಪಿಯುಸಿ ವಿಭಾಗದ ಉಪನಿರ್ದೇಶಕ ಬಿ.ಕೃಷ್ಣಪ್ಪ ತಿಳಿಸಿದರು.
ಬುಧವಾರ ಪಟ್ಟಣದ ಎಸ್.ಬಂಗಾರಪ್ಪ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ(ಪಿಯು) ಇಲಾಖೆ ಹಾಗೂ ಅಮರಜ್ಯೋತಿ ಸಂಯುಕ್ತ ಪಿಯು ಕಾಲೇಜ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2023-24ನೇ ಸಾಲಿನ ತಾಲೂಕು ಮಟ್ಟದ ಪಿಯು ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮದಿಂದ ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ. ಗ್ರಾಮೀಣ ಭಾಗದ ಅನೇಕ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅಂತಹ ಕ್ರೀಡಾಪಟುಗಳು ನಮ್ಮಲ್ಲಿಯೂ ಇದ್ದು, ಅವರನ್ನು ಗುರುತಿಸುವ ಕೆಲಸ ಶಿಕ್ಷಣ ಸಂಸ್ಥೆಗಳು ಮಾಡಬೇಕು ಎಂದರು.
ಅಮರಜ್ಯೋತಿ ಪಿಯು ಕಾಲೇಜಿನ ಪ್ರಾಚಾರ್ಯೆ ಸಿಸ್ಟರ್ ಸಿಲ್ವಿಯಾ ಮಾತನಾಡಿ, ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸುವ ಕೆಲಸ ಶಿಕ್ಷಕರು, ಪಾಲಕರ ಮೇಲಿರುತ್ತೆ. ಕ್ರೀಡೆ ಎಂದರೆ ಶಿಸ್ತು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ತೋರಿ ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕು ಎಂದರು.
ಅಮರಜ್ಯೋತಿ ಪಿಯು ಕಾಲೇಜ್ ಸಂಚಾಲಕಿ ಸಿಸ್ಟರ್ ಲೆನಿಟ ಕ್ರೀಡಾಜ್ಯೋತಿ ಸ್ಥಾಪಿಸಿದರು. ಕ್ರೀಡಾಕೂಟಕ್ಕೆ ಪುರಸಭೆ ಸದಸ್ಯ ಎಂ.ಡಿ. ಉಮೇಶ್ ಚಾಲನೆ ನೀಡಿದರು.
ಪುರಸಭೆ ಸದಸ್ಯರಾದ ಈರೇಶ್ ಮೇಸ್ತಿç, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ಮಂಜುನಾಥ್, ಪ್ರಾಚಾರ್ಯ ಸಂಘದ ಜಿಲ್ಲಾಧ್ಯಕ್ಷ ಚಂದ್ರಪ್ಪ ಗುಂಡುಪಲ್ಲಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸಿ.ಆರ್.ಲಿಂಗರಾಜ ಒಡೆಯರ್, ಪ್ರಾಚಾರ್ಯ ಕೆ. ಸುರೇಶಪ್ಪ, ಟಿ. ಜಗದೀಶ್, ಲೇಖನ್, ಎಸ್.ಎಫ್. ಕೇಸರಿ, ಅಮರಜ್ಯೋತಿ ಪಿಯು ಕಾಲೇಜ್‌ನ ಉಪನ್ಯಾಸಕರಾದ ಸುಬ್ರಾಯ ಹಳ್ಳರ್, ನಟರಾಜ್, ಮಂಜುಪ್ಪ, ವೆಂಕಟೇಶ್, ಪುರುಷೋತ್ತಮ, ಪೂಜಾ, ಅಶ್ವಿನಿ ಇತರರಿದ್ದರು.