ಶಿವಮೊಗ್ಗದಲ್ಲಿ ಬಿಜೆಪಿಗೆ ಉತ್ತಮ ವಾತಾವರಣ: ಬಿವೈಆರ್

Raghavendra B.Y. (32)
Published on

ಶಿವಮೊಗ್ಗ: ಎಲ್ಲ ಸವಾಲುಗಳನ್ನು ಎದುರಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡುತ್ತಿದೆ. ಬಂಗಾರಪ್ಪ ಸ್ಪರ್ಧಿಸಿದಾಗಲೂ ನೇರ ಸ್ಪರ್ಧೆ ಇತ್ತು. ಈ ಬಾರಿಯೂ ನೇರ ಸ್ಪರ್ಧೆಯೇ ಇದೆ. ಬಿಜೆಪಿಗೆ ಉತ್ತಮ ವಾತಾವರಣವಿದೆ. ಅದನ್ನು ಮತವಾಗಿ ಪರಿವರ್ತಿಸಿಕೊಳ್ಳುತ್ತೇವೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕೆಲಸವನ್ನು ಜನರ ಮುಂದಿಟ್ಟು ಮತ ಕೇಳುತ್ತೇವೆ. ಈ ಬಾರಿ ಎನ್‌ಡಿಎ ಮೈತ್ರಿಕೂಟ 400ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದು ಹೇಳಿದರು.
ಮಾಜಿ ಸಚಿವ ಕುಮಾರ್ ಬಂಗಾರಪ್ಪ ವೈಯಕ್ತಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು. ಈಗ ಚುನಾವಣೆ ಎದುರಾಗಿದೆ. ಅವರು ಬಿಜೆಪಿ ಚಟುವಟಿಕೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿವೈಆರ್ ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net