ಸೋಮಣ್ಣರಿಂದ ಒಳ್ಳೆಯ ನಡವಳಿಕೆ ನಿರೀಕ್ಷಿಸಲು ಸಾಧ್ಯವಿಲ್ಲ; ಎಚ್.ಡಿ.ಕೆ

23adarshkdga1
Published on

ಮಡಿಕೇರಿ: ಸಚಿವ ಸೋಮಣ್ಣರಿಂದ ಒಳ್ಳೆಯ ನಡವಳಿಕೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.


ಖಾಸಗಿ ಕಾರ್ಯಕ್ರಮಕ್ಕೆ ಕೊಡಗಿಗೆ ಭೇಟಿ ನೀಡಿದ್ದ ಸಂದರ್ಭ ಸಚಿವ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು.


ಅದು ಬಿಜೆಪಿಯವರ ಸಂಸ್ಕೃತಿಯನ್ನು ತೋರಿಸುತ್ತದೆ. ಅವರ ನಡವಳಿಕೆಯನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಅವರು ಎರಡು ತರಹದ ಮುಖ ಹೊಂದಿದ್ದಾರೆ. ಎದುರು ಸಿಕ್ಕಾಗ ಒಂದು ರೀತಿ ಮಾತನಾಡಿಸುತ್ತಾರೆ. ಆದರೆ ಒಳಗೆ ಇರುವ ನಡವಳಿಕೆಯೇ ಬೇರೆ ಇದೆ ಎಂದು ಹೇಳಿದರು.


ಸಾರ್ವಜನಿಕರು ಅಹವಾಲು ಕೊಡಲು ಬಂದಾಗ ಅವರು ಹೇಗೆ ನಡೆದುಕೊಳ್ಳುತ್ತಾರೆ ಎಂಬುದು ಗೊತ್ತಿದೆ. ಅವರಿಂದ ಒಳ್ಳೆಯ ನಡವಳಿಕೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಬಿಜೆಪಿಯ ಹಲವು ಸಚಿವರು ಹಿಂದೆ ಹೀಗೆ ನಡೆದುಕೊಂಡಿದ್ದು ಗೊತ್ತೇ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net