ಉತ್ತಮ ಗುಣಗಳಿಂದ ಸತ್ಪ್ರಜೆಗಳಾಗಲು ಸಾಧ್ಯ

03-04-Shiva-1
Published on

ರಾಯಚೂರು: ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ನಮ್ಮ ಸಂಸ್ಕೃತಿಯನ್ನು ಕಲಿಸುವುದು ಅಗತ್ಯವಾಗಿದೆ. ಉತ್ತಮ ಸಂಸ್ಕಾರದಿಂದ ಮಕ್ಕಳು ಮುಂದೆ ಉತ್ತಮ ನಾಗರಿಕರಾಗಿ ಬಾಳಲು ಸಾಧ್ಯ ಎಂದು ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸೋಮವಾರಪೇಟೆ ಹಿರೇಮಠದಲ್ಲಿ ಬೇಸಿಗೆ ಸಂಸ್ಕಾರ ತರಬೇತಿ ಶಿಬಿರ ಉದ್ಘಾಟಿಸಿ ಸೋಮವಾರ ಮಾತನಾಡಿದರು. ಮೂರು ವರ್ಷದ ಬುದ್ದಿ ನೂರು ವರ್ಷದವರೆಗೆ ಎನ್ನುವಂತೆ ಬಾಲ್ಯದಲ್ಲಿ ಮಕ್ಕಳಿಗೆ ಕಲಿಸುವ ಉತ್ತಮ ಗುಣಗಳು ಅವರನ್ನು ಉತ್ತಮ ಪ್ರಜೆಯನ್ನಾಗಿ ಮಾಡಲಿವೆ ಎಂದರು.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಗೀಳಿಗೆ ಬಿದ್ದು ಸಾಧನೆಯತ್ತ ನಿರಾಸಕ್ತಿ ತೋರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಸಂಸ್ಕಾರ ಶಿಬಿರದ ಮೂಲಕ ವೇದ ಅಧ್ಯಯನ, ಪೂಜಾ ವಿಧಿ-ವಿಧಾನಗಳನ್ನು ಕಲಿಸಿ ಕೊಡಲಾಗುತ್ತಿದೆ ಎಂದು ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net