ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯ ಗುಡ್ ಫ್ರೈಡೆ ಆಚರಣೆ

udp-18-good friday
Published on

ಉಡುಪಿ: ಜಿಲ್ಲೆಯಾದ್ಯಂತ ಕೆಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರ ( ಗುಡ್ ಫ್ರೈಡೆ) ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಧರ್ಮಪ್ರಾಂತ್ಯದ ಪ್ರಧಾನ ದೇವಾಲಯ ಮಿಲಾಗ್ರಿಸ್​ ಕ್ಯಾಥೆಡ್ರಲ್​ ಚರ್ಚ್ನಲ್ಲಿ ಧರ್ಮಪ್ರಾಂತ್ಯದ ಧಮಾರ್ಧ್ಯಕ್ಷ ವಂ.ಡಾ. ಜೆರಾಲ್ಡ್​ ಐಸಾಕ್​ ಲೋಬೊ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ಚರ್ಚಿನ ಪ್ರಧಾನ ಧರ್ಮಗುರು ಹಾಗೂ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್​ ಫರ್ಡಿನಾಂಡ್​ ಗೊನ್ಸಾಲ್ವಿಸ್​, ಸಹಾಯಕ ಧರ್ಮಗುರು ವಂ.ಪ್ರದಿಪ್​ ಕಾರ್ಡೊಜಾ, ಪೋಪ್​ ಭಾರತೀಯ ರಾಯಭಾರಿಗಳ ಕಾರ್ಯದರ್ಶಿ ವಂ. ಆಲ್ಬಟೋರ್ ನಪ್ಲಿತಾನೋ ಹಾಗೂ ಬೊಲಿವಿಯಾ ರಾಯಭಾರಿಗಳ ಕಾರ್ಯದರ್ಶಿ ವಂ.ಐವನ್​ ಮಾರ್ಟಿಸ್​, ಕಟಪಾಡಿ ಹೋಲಿ ಕ್ರೊಸ್​ ಸಂಸ್ಥೆಯ ನಿರ್ದೇಶಕ ವಂ. ರೋನ್ಸನ್​ ಡಿಸೋಜಾ ಉಪಸ್ಥಿತರಿದ್ದರು.

ಚರ್ಚ್ಗಳಲ್ಲಿ ಕ್ರೈಸ್ತರು ಉಪವಾಸ, ಧ್ಯಾನ, ಪ್ರಾರ್ಥನೆ ಸಲ್ಲಿಸಿದರು. ಯೇಸುವಿನ ಮರಣದ ಹಿನ್ನೆಲೆಯಲ್ಲಿ ಎಲ್ಲೆಡೆ ಮೌನ ಅವರಿಸಿತ್ತು. ಕೆಲವು ಚರ್ಚ್ಗಳಲ್ಲಿ ಯೇಸು ಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನಪ್ಪುವ ಘಟನಾವಳಿಗಳನ್ನು ಪ್ರಸ್ತುತಪಡಿಸಲಾಯಿತು. ಧರ್ಮಗುರುಗಳು ರಕ್ತವರ್ಣದ ಪೂಜಾ ಬಟ್ಟೆ ಧರಿಸಿ ಯೇಸು ಕ್ರಿಸ್ತನ ಕೊನೆಯ ಘಳಿಗೆಗಳ ವೃತ್ತಾಂತ ಓದಿದರು. ಬಳಿಕ ಶಿಲುಬೆಯನ್ನು ಮೆರವಣಿಗೆಯಲ್ಲಿ ತರಲಾಯಿತು. ತ್ಯಾಗದ ಉಳಿಕೆಯ ಹಣವನ್ನು ಬಡವರಿಗೆ ಹಂಚಲಾಯಿತು.

ವಿವಿಧೆಡೆ  ಗುಡ್ ಫ್ರೈಡೆ

ಜಿಲ್ಲೆಯ ವಿವಿಧ ಚರ್ಚುಗಳಲ್ಲಿ ಆಯಾ ಚರ್ಚುಗಳ ಧರ್ಮಗುರುಗಳ ನೇತೃತ್ವದಲ್ಲಿ ಪವಿತ್ರ ಶುಕ್ರವಾರದ ವಿಧಿ ವಿಧಾನಗಳು ಜರುಗಿದವು. ಉಡುಪಿ ಶೋಕಮಾತಾ ಚರ್ಚಿನಲ್ಲಿ ಧರ್ಮಗುರು ವಂ. ಚಾರ್ಲ್ಸ್​ ಮಿನೇಜಸ್​, ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ವಂ.ಡೆನಿಸ್​ ಡೆಸಾ, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ವಂ.ಪಾವ್ಲ್​ ರೇಗೊ, ಶಿರ್ವ ಆರೋಗ್ಯ ಮಾತಾ ಚರ್ಚಿನಲ್ಲಿ ವಂ.ಡಾಣಲೆಸ್ಲಿ ಡಿಸೋಜಾ, ಕಾರ್ಕಳ ಸಂತ ಲಾರೇನ್ಸ್​ ಬಸಿಲಿಕಾದಲ್ಲಿ ವಂ. ಆಲ್ಬನ್​ ಡಿಸೋಜಾ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net