

ಹೊಳೆನರಸೀಪುರ: ಕರೊನಾ ಭೀತಿಯ ಎರಡು ತಿಂಗಳ ಅವಧಿಯಲ್ಲಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿವಿಧ ಇಲಾಖೆಯ ಸಿಬ್ಬಂದಿ ಸೇನಾನಿಗಳ ರೀತಿಯಲ್ಲಿ ಹಗಲಿರುಳು ಶ್ರಮಿಸಿ ಕೆಲಸ ಮಾಡಿದ್ದಾರೆ ತಹಸೀಲ್ದಾರ್ ಕೆ.ಆರ್.ಶ್ರೀನಿವಾಸ ಮೆಚ್ಚುಗೆ ವ್ಯಕ್ತಪಡಿಸಿದರು.
ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಮಂಗಳವಾರ ವಿಜಯವಾಣಿಯೊಂದಿಗೆ ಮಾತನಾಡಿದರು. ತಾಪಂ ಇಒ, ಟಿಎಚ್‌ಒ, ವೈದ್ಯಾಧಿಕಾರಿ, ಡಿವೈಎಸ್‌ಪಿ, ಪುರಸಭೆ ಮುಖ್ಯಾಧಿಕಾರಿ, ಕಂದಾಯ ಇಲಾಖೆ, ವಲಯ ಅರಣ್ಯ ಇಲಾಖೆ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ, ಗೃಹರಕ್ಷಕ ದಳ, ಕಾರ್ಮಿಕ ಇಲಾಖೆ, ಎಪಿಎಂಸಿ ಹಾಗೂ ಇತರ ಇಲಾಖೆಗಳ ಮುಖ್ಯಸ್ಥರ ಸಹಕಾರ ಹಾಗೂ ಮಾರ್ಗದರ್ಶನದಲ್ಲಿ ಇಲಾಖೆ ಸಿಬ್ಬಂದಿ ಕರೊನಾ ಸೇನಾನಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದರು.
ತಾಲೂಕಿನ ಗಡಿಗಳ ಚೆಕ್‌ಪೋಸ್ಟ್‌ಗಳು, ಕ್ವಾರಂಟೈನ್ ಕೇಂದ್ರಗಳು, ಬಡವರ ಹಾಗೂ ನಿರ್ಗತಿಕರ ಪುನರ್‌ವಸತಿ ಕೇಂದ್ರಗಳು, ಆಶಾ ಕಾರ್ಯಕರ್ತೆಯರು ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ಭೇಟಿ ಹಾಗೂ ಇತರ ಕಾರ್ಯಗಳು ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.