

ಶಿವಮೊಗ್ಗ: ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ವಿದ್ಯಾರ್ಥಿಗಳು ಎಟಿಎನ್‌ಸಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಕುವೆಂಪು ವಿವಿ ಅಂತರಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಆಚಾರ್ಯ ಅದ್ವಿತೀಯದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಶುಭಾ, ಮೇಘಶ್ರೀ, ನಿಶ್ಚಿತಾ, ವರುಣ್, ಲೋಕೇಶ್ ಸಮೂಹ ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ, ಆರ್.ತರುಣ್ ಸೂಪರ್-60 ಸ್ಪರ್ಧೆಯಲ್ಲಿ ಪ್ರಥಮ, ಬಿ.ಎಂ.ಇಂದು ಮತ್ತು ಎಚ್.ಮುಕ್ತಾ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಮಂಗಳವಾರ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಟಿ.ಅವಿನಾಶ್, ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಶಿವಮೂರ್ತಿ, ಪ್ರಾಧ್ಯಾಪಕರಾದ ರೇವಣಸಿದ್ದೇಶ್ವರ ಹಂಜಿ, ಡಾ. ಕೆ.ಎಸ್.ಸರಳಾ, ಕೆ.ಇ.ಗೋವಿಂದರಾಜ್ ಇತರರಿದ್ದರು.