

ಆನಂದಪುರ: ಬಳ್ಳಿಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಆನಂದಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಕಿರಿಯ ಪ್ರಾಥಮಿಕ ವಿಭಾಗದ ಲಘು ಸಂಗೀತ ಹಾಗೂ ಭಕ್ತ್ತಿಗೀತೆ ಗಾಯನದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅಭಿನಯ ಗೀತೆ, ಧಾರ್ಮಿಕ ಪಠಣ, ಕ್ಲೇ ಮಾಡಲಿಂಗ್‌ನಲ್ಲಿ ದ್ವಿತೀಯ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಹಿರಿಯ ಪ್ರಾಥಮಿಕ ವಿಭಾಗದ ಅಭಿನಯ ಗೀತೆ, ಕ್ಲೇ ಮಾಡಲಿಂಗ್ ಹಾಗೂ ಲಘು ಸಂಗೀತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.