ಗುಂಡ್ಲುಪೇಟೆ ಸುತ್ತ ಮುತ್ತ ಉತ್ತಮ ಮಳೆ

ಗುಂಡ್ಲುಪೇಟೆ ಸುತ್ತ ಮುತ್ತ ಉತ್ತಮ ಮಳೆ
Published on

ಗುಂಡ್ಲುಪೇಟೆ: ಪಟ್ಟಣ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ ಉತ್ತಮ ಮಳೆಯಾಗಿದೆ.

ಸುಮಾರು ಒಂದು ಗಂಟೆಗಳ ಕಾಲ ಸುರಿದ ಮಳೆಗೆ ಪಟ್ಟಣದ ಬಸ್ ನಿಲ್ದಾಣ, ಕನಕದಾಸ ವೃತ್ತ, ಆರ್‌ಟಿಒ ಸರ್ಕಲ್ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಮಸ್ಯೆಯಾಯಿತು. ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು.

ಸೋಮವಾರ ಪಟ್ಟಣದಲ್ಲಿ ಅಂಬೇಡ್ಕರ್ ಅವರ 133 ನೇ ಜಯಂತ್ಯುತ್ಸವದ ಹಿನ್ನೆಲೆ ಅಲ್ಲಲ್ಲಿ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು. ಕಾರ್ಯಕ್ರಮ ಮುಗಿದ ನಂತರ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡದೆ ಇರುವುದರಿಂದ ಸಂವಿಧಾನ ಪೀಠಿಕೆ ಇರುವ ಫ್ಲೆಕ್ಸ್‌ಗಳು ಗಾಳಿ ಮಳೆಗೆ ಕಿತ್ತು ಬಿದ್ದಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net