ರಾಜ್ಯದಲ್ಲಿ 7 ದಿನ ಉತ್ತಮ ಮಳೆ: ಹವಾಮಾನ ಇಲಾಖೆ ಮೂನ್ಸೂಚನೆ

21blrp2. RAIN
Published on

ಬೆಂಗಳೂರು:ರಾಜ್ಯದ ಹಲವೆಡೆ ಮುಂದಿನ 7 ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಂಡರೆ, ಶಿವಮೊಗ್ಗ ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಿತ್ತು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ,ಹಾವೇರಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರದಲ್ಲಿ ಏ.13ರಿಂದ ಏ.19ರವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ತಾಪಮಾನ ಏರಿಳಿತ: ಉತ್ತರ ಕರ್ನಾಟಕದ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಆ ಭಾಗದಲ್ಲಿ 2-3 ಡಿ.ಸೆ.ಉಷ್ಣಾಂಶ ಇಳಿಕೆಯಾಗಿದ್ದು, ಮುಂದಿನ 5 ದಿನ ಇದೇ ರೀತಿ ವಾತಾವರಣ ಇರಲಿದೆ. ಕಲಬುರಗಿಯಲ್ಲಿ 40.6 ಡಿ.ಸೆ. ಉಷ್ಣಾಂಶ ದಾಖಲಾಗಿದೆ. ಕರಾವಳಿ ಮತ್ತು ದಣ ಕರ್ನಾಟಕದ ಜಿಲ್ಲೆಗಳಲ್ಲೂ 35-36 ಡಿ.ಸೆ. ಉಷ್ಣಾಂಶ ವರದಿಯಾಗಿದ್ದು, ಮುಂದಿನ 5 ದಿನ ವಾತಾವರಣದಲ್ಲಿ ದೊಡ್ಡ ಬದಲಾವಣೆ ಆಗುವುದಿಲ್ಲ. ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 22 ಡಿ.ಸೆ. ಇರುವ ನಿರೀಕ್ಷೆ ಇದೆ ಎಂದು ಇಲಾಖೆ ಹೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net