ಗಾರ್ನಿಯರ್ ಹೇರ್ ಕಲರಿಂಗ್‌ಗೆ ಉತ್ತಮ ಪ್ರತಿಕ್ರಿಯೆ

12HDK06
ಎಚ್.ಡಿ.ಕೋಟೆ ಪಟ್ಟಣದ ಪುರಸಭಾ ಕಾರ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಗಾರ್ನಿಯರ್ ಹೇರ್ ಕಲರಿಂಗ್ ಅಭಿಯಾನದಲ್ಲಿ ಮಹಿಳೆಯರು ಪಾಲ್ಗೊಂಡಿದ್ದರು.
Published on

ಎಚ್.ಡಿ.ಕೋಟೆ: ಪಟ್ಟಣದಲ್ಲಿ ಮೂರು ದಿನ ನಂ.1 ಕನ್ನಡ ದಿನಪತ್ರಿಕೆ ವಿಜಯವಾಣಿ ಸಹಯೋಗದಲ್ಲಿ ಆಯೋಜಿಸಿದ್ದ ಗಾರ್ನಿಯರ್ ಹೇರ್ ಕಲರಿಂಗ್ ಅಭಿಯಾನ ಬುಧವಾರ ಅಂತ್ಯವಾಯಿತು.

ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಪಟ್ಟಣದ ಪುರಸಭಾ ಕಾರ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಅಭಿಯಾನದಲ್ಲಿ ಪೌರಕಾರ್ಮಿಕರು, ನೌಕರರು, ಶಿಕ್ಷಕರು, ಮಹಿಳೆಯರು ಹಾಗೂ ವಿವಿಧ ಮಹಿಳಾ ಸಂಘಟನೆಗಳ ಸದಸ್ಯರು ಪಾಲ್ಗೊಂಡು ಕೂದಲಿಗೆ ಕಲರಿಂಗ್ ಮಾಡಿಸಿಕೊಂಡರು. ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಿಂದ 200 ಕ್ಕೂ ಹೆಚ್ಚು ಜನರು ಹೇರ್ ಕಲರಿಂಗ್ ಮಾಡಿಸಿಕೊಂಡರು.

ಗಾರ್ನಿಯರ್ ಹಳೆಯ ಕಂಪನಿಯಾಗಿದ್ದು, ಜನರಿಗೆ ಗುಣಮಟ್ಟದ ಹೇರ್ ಕಲರ್ ನೀಡುತ್ತಿದೆ. ಇದನ್ನು ಹಚ್ಚಿಕೊಳ್ಳುವುದರಿಂದ ಯಾವುದೇ ಅಡ್ಡ ಪರಿಣಾಮ ಇಲ್ಲ. ಇಂತಹ ಹಲವಾರು ಜನಪ್ರಿಯತೆ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿಜಯವಾಣಿ ಓದುಗರಿಗೆ ಸುದ್ದಿಗಳನ್ನು ಕಟ್ಟಿಕೊಡುವುರ ಜತೆಗೆ ಸಾಮಾಜಿಕ ಕೆಲಸಗಳಲ್ಲೂ ತೊಡಗಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಇಂತಹ ಸೇವಾ ಕಾರ್ಯ ನಿರಂತರವಾಗಿರಲಿ ಎಂದು ಸಾರ್ವಜನಿಕರು ಆಶಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net