ಗಾರ್ನಿಯರ್ ಹೇರ್ ಕಲರಿಂಗ್ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ

11HDK05
ಎಚ್.ಡಿ.ಕೋಟೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ಆಯೋಜಿಸಿದ್ದ ಹೇರ್ ಕಲರಿಂಗ್ ಅಭಿಯಾನದಲ್ಲಿ ಮಹಿಳೆಯರು, ಪುರಷರು ಪಾಲ್ಗೊಂಡಿದ್ದರು.
Published on

ಎಚ್.ಡಿ.ಕೋಟೆ: ನಂ.1 ಕನ್ನಡ ದಿನಪತ್ರಿಕೆ ವಿಜಯವಾಣಿ ಸಹಯೋಗದಲ್ಲಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಆಯೋಜಿಸಿರುವ ಗಾರ್ನಿಯರ್ ಹೇರ್ ಕಲರಿಂಗ್ ಅಭಿಯಾನಕ್ಕೆ ಎರಡನೇ ದಿನವಾದ ಮಂಗಳವಾರವೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಜೂ.12ವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡನೇ ದಿನದಂದು ಮಹಿಳೆಯರು, ವಿವಿಧ ಮಹಿಳಾ ಸಂಘಟನೆಗಳ ಸದಸ್ಯರು ತಲೆಗೆ ಬಣ್ಣ ಹಚ್ಚಿಸಿಕೊಂಡು ಸಂತೋಷ ಪಟ್ಟರು. ಇವರೊಂದಿಗೆ ಯುವಕ, ಯುವತಿಯರು ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ 150ಕ್ಕೂ ಹೆಚ್ಚು ಜನರು ಹೇರ್ ಕಲರಿಂಗ್ ಮಾಡಿಸಿಕೊಂಡರು.

ಗಾರ್ನಿಯರ್ ಕಂಪನಿ ಹಳೆಯ ಕಂಪನಿಯಾಗಿದ್ದು, ಗುಣಮಟ್ಟದ ಹೇರ್‌ಕಲರ್‌ಗೆ ಹೆಸರು ವಾಸಿಯಾಗಿದೆ. ಇದನ್ನು ಹಚ್ಚಿಕೊಳ್ಳುವುದರಿಂದ ಆರೋಗ್ಯದ ಮೇಲೆ ಅಡ್ಡಪರಿಣಾಮವಿಲ್ಲ. ವಿಜಯವಾಣಿ ಓದುಗರಿಗೆ ಸುದ್ದಿಗಳನ್ನು ಕಟ್ಟಿಕೊಡುವುರ ಜತೆಗೆ ಸಾಮಾಜಿಕ ಕೆಲಸಗಳಲ್ಲೂ ತೊಡಗಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಇಂತಹ ಸೇವಾ ಕಾರ್ಯವನ್ನು ಪತ್ರಿಕೆ ಮುಂದುವರಿಸಲಿ. ತಾಲೂಕಿನ ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ತಾಲೂಕು ಕೃಷಿ ಅಧಿಕಾರಿ ಬಿ.ರಾಜು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net