

ಮಡಿಕೇರಿ :
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಸಭೆಗೆ ಸಾರ್ವಜನಿರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮನವಿ ಸಲ್ಲಿಸಿದ್ದು ವಿಶೇಷವಾಗಿತ್ತು. ನೂರಾರು ಮನವಿದಾರರು ಜನಸ್ಪಂದನ ಸಭೆಯಲ್ಲಿ ಹಾಜರಾಗಿ ತಮ್ಮ ಅಹವಾಲು ಸಲ್ಲಿಸಿದರು.
ಸಾರ್ವಜನಿಕರ ಕುಂದುಕೊರತೆಗಳನ್ನು ಸಾವದಾನದಿಂದ ಆಲಿಸಿದ ಡಾ.ಮಂತರ್ ಗೌಡ ಅವರು ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮತ್ತೂ ಕೆಲವು ಅರ್ಜಿಗಳಿಗೆ ಕಾಲಮಿತಿಯಲ್ಲಿ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿದರು.
ಸಾರ್ವಜನಿಕರು ಸಾಲು ಸಾಲು ನಿಂತು ತಮ್ಮ ಅಹವಾಲನ್ನು ಶಾಸಕರಿಗೆ ಮನವಿ ಮಾಡಿದರು.