

ನಂಜನಗೂಡು: ತಾಲೂಕಿನ ಹುರ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.95.23 ಫಲಿತಾಂಶ ದೊರೆತಿದ್ದು, ಶಾಲೆಯ ವಿದ್ಯಾರ್ಥಿನಿ ಕೆ.ಕೃತಿಕಾ 577 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಪರೀಕ್ಷೆ ಬರೆದಿದ್ದ 42 ವಿದ್ಯಾರ್ಥಿಗಳ ಪೈಕಿ 40 ಮಂದಿ ಉತ್ತೀರ್ಣರಾಗಿದ್ದಾರೆ. ಈ ಪೈಕಿ 4 ಅತ್ಯುನ್ನತ ದರ್ಜೆ, 17 ಪ್ರಥಮ ದರ್ಜೆ, 10 ದ್ವಿತೀಯ ದರ್ಜೆ ಹಾಗೂ 9 ಮಂದಿ ಸಾಮಾನ್ಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಸಂಜನಾ ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕಗಳನ್ನು ಪಡೆದುಕೊಂಡಿದ್ದಾಳೆ. ಶಾಲೆಗೆ ಉತ್ತಮ ಫಲಿತಾಂಶ ತಂದುಕೊಟ್ಟಿರುವ ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.