ಬೀಳಗಿ ಆಸ್ಪತ್ರೆಯಿಂದ ಉತ್ತಮ ಸೇವೆ

Good service from Fallagi hospital
ಬೀಳಗಿ ಪಟ್ಟಣದಲ್ಲಿ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಭೇಟಿ ನೀಡಿ ಔಷಧೋಪಚಾರಗಳ ಮತ್ತು ಕುಂದುಕೊರತೆಗಳ ಮಾಹಿತಿ ಪಡೆದರು.
Published on

ಬೀಳಗಿ: ಬೀಳಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಂಗಳವಾರ ಭೇಟಿ ನೀಡಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ವೈದ್ಯರು, ಸಿಬ್ಬಂದಿ ಸೇವೆ ಮತ್ತು ರೋಗಿಗಳ ಉಪಚಾರಕ್ಕೆ ನೀಡುವ ಔಷಧೋಪಚಾರಗಳ ಮತ್ತು ಕುಂದು ಕೊರತೆಗಳ ಮಾಹಿತಿ ಪಡೆದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆಯಲ್ಲಿ ಬೀಳಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸಂಖ್ಯೆ ಅಧಿಕವಾಗಿದೆ.

ಇಲ್ಲಿಯ ವೈದ್ಯಕೀಯ ಸೇವೆ ಉತ್ತಮವಾಗಿದೆ. ಒಳ ಮತ್ತು ಹೊರರೋಗಿಗಳು ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸೇವೆ ನಿರ್ವಹಿಸಬೇಕು.

ಸ್ಪತ್ರೆಯಲ್ಲಿ ಚಿಕಿತ್ಸೆ ಮತ್ತು ರೋಗಿಗಳ ಆರೋಗ್ಯ ಉಪಚಾರಕ್ಕೆ ಬೇಕಾಗುವ ಔಷಧಗಳ ಕೊರತೆಯಾಗದಂತೆ ನೋಡಿಕೊಳ್ಳುವಂತೆ ವೈದ್ಯರಿಗೆ ಸೂಚಿಸಿರುವೆ ಎಂದರು.

ತಾಪಂ ಇಒ ಸಿದ್ದು ನಕ್ಕರಗುಂದಿ, ತಾಲೂಕು ಆರೋಗ್ಯಾಧಿಕಾರಿ ಡಾ. ದಯಾನಂದ ಕರೆಣ್ಣವರ, ಸಂಜಯ ಯಡಹಳ್ಳಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net