ಸದುಪಯೋಗವಾಗಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಜ್ಞಾನ ನಿಧಿ ಶಿಷ್ಯವೇತನ

23sdp3- sudnayana nidhi
Published on

ಸಿದ್ದಾಪುರ: ಮಕ್ಕಳಿಗೆ ಶಿಕ್ಷಣ ಅತ್ಯಂತ ಅವಶ್ಯವಾಗಿದೆ. ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆನ್ನುವುದರಿಂದ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುವುದಕ್ಕಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಸುಜ್ಞಾನ ನಿಧಿ ಶಿಷ್ಯವೇತನ ನೀಡುತ್ತಿದ್ದು, ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಪಡೆದುಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಎ. ಬಾಬು ನಾಯ್ಕ ಹೇಳಿದರು.

ಪಟ್ಟಣದ ಗಂಗಾಂಬಿಕಾ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸಿದ್ದಾಪುರ ವತಿಯಿಂದ 2024-25ನೇ ಸಾಲಿನಲ್ಲಿ ಸುಜ್ಞಾನನಿಧಿ ಶಿಷ್ಯವೇತನ ಕಾರ್ಯಕ್ರಮದಡಿ ಪ್ರಸಕ್ತ ವರ್ಷ ಡಾ. ವೀರೇಂದ್ರ ಹೆಗ್ಗಡೆ ಅವರು ಸಿದ್ದಾಪುರ ತಾಲೂಕಿನ 78 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಿಸಿ ಅವರು ಮಾತನಾಡಿದರು.

ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಸುಭಾಸ ನಾಯ್ಕ ಕಾನಸೂರು ಮಾತನಾಡಿ, ಧರ್ಮಸ್ಥಳ ಸಂಸ್ಥೆ ಕೇವಲ ಶಿಷ್ಯವೇತನ ನೀಡುವುದಲಕಲ್ಲದೇ ಹಲವು ಯೋಜನೆಗಳು ಮನೆಬಾಗಿಲೆಗೆ ತಲುಪುವಂತೆ ಮಾಡಿದ್ದಾರೆ ಎಂದರು.

ಬಿಇಒ ಎಂ.ಎಚ್. ನಾಯ್ಕ, ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮೀಕಾಂತ ನಾಯ್ಕ, ಜ್ಞಾನವಿಕಾಸ ಸಮನ್ವಯಾಧಿಕಾರಿಗಳು, ಕೃಷಿ ಮೇಲ್ವಿಚಾರಕರು ಉಪಸ್ಥಿತರಿದ್ದರು.

ತಾಲೂಕು ಯೋಜನಾಧಿಕಾರಿ ಗಿರೀಶ ಜಿ.ಪಿ. ಸ್ವಾಗತಿಸಿದರು. ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿದರು. ಮೇಲ್ವಿಚಾರಕ ಪ್ರದೀಪ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net