ಉತ್ತಮ ಕೆಲಸದಿಂದ ಜನರ ವಿಶ್ವಾಸ ಪಡೆಯಲು ಸಾಧ್ಯ

7 ckm 2
ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರಸಭೆ ಆಯುಕ್ತರಾಗಿದ್ದ ಕೃಷ್ಣಮೂರ್ತಿ ಅವರು ತಮ್ಮ ಸ್ವ ಸ್ಥಾನಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ನಗರಸಭೆಯಿಂದ ಅವರಿಗೆ ಬೀಳ್ಕೊಡುಗೆ ನೀಡಲಾಯಿತು. ವರಸಿದ್ಧಿ ವೇಣುಗೋಪಾಲ್, ಅಮೃತೇಶ್ ಚನ್ನಕೇಶವ, ಅರುಣ್, ರವಿ, ರಮೇಶ್ ನಾಯ್ಡು ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಿದಾಗ ಮಾತ್ರ ಜನರ ವಿಶ್ವಾಸ ಗಳಿಸಲು ಸಾಧ್ಯವಾಗುತ್ತದೆ. ಹೀಗೆ ಜನರ ವಿಶ್ವಾಸ ಗಳಿಸಿ ಕೆಲಸ ಮಾಡಿದಾಗ ಊರಿನ ಅಭಿವೃದ್ಧಿಯೂ ಸಾಧ್ಯವಾಗುತ್ತದೆ ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರಸಭೆ ಆಯುಕ್ತರಾಗಿ ನಿಯುಕ್ತಿಗೊಂಡಿದ್ದ ಕೃಷ್ಣಮೂರ್ತಿ ಅವರಿಗೆ ಚುನಾವಣೆ ಬಳಿಕ ಅವರ ಸ್ವಸ್ಥಾನಕ್ಕೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ನೀಡಿ ಮಾತನಾಡಿದ ಅವರು, ನಗರಸಭೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಾಕ್ಷಣ ಕೃಷ್ಣಮೂರ್ತಿ ಅವರು ನಗರದ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಮಾಣಿಕ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ವರ್ಗಾವಣೆಗೊಂಡ ಆಯುಕ್ತ ಎಚ್.ಟಿ.ಕೃಷ್ಣಮೂರ್ತಿ ಮಾತನಾಡಿ, ಸರ್ಕಾರದ ಆದೇಶ ಪಾಲನೆ ಮಾಡಬೇಕಾಗಿರುವುದು ಪ್ರತಿಯೊಬ್ಬ ನೌಕರರ ಕರ್ತವ್ಯ. ಆ ನಿಟ್ಟಿನಲ್ಲಿ ನನ್ನನ್ನು ಇಲ್ಲಿಗೆ ವರ್ಗಾವಣೆ ಮಾಡಲಾಗಿತ್ತು. ಚುನಾವಣೆ ನೀತಿ ಸಂಹಿತೆ ಮುಕ್ತಾಯಗೊಂಡ ಬಳಿಕ ಮೂಲ ಸ್ಥಾನಕ್ಕೆ ಹೋಗಬೇಕಾಗಿದೆ ಎಂದರು.
ನಗರಸಭೆಯಲ್ಲಿ ಕಳೆದ ಮೂರು ತಿಂಗಳು ನಿರ್ವಹಿಸಿದ ಕರ್ತವ್ಯ ನನಗೆ ಖುಷಿ ತಂದಿದೆ. ಅಧಿಕಾರಾವಧಿಯಲ್ಲಿ ಎಲ್ಲ ಅಧಿಕಾರಿಗಳ ಸಹಕಾರ ದೊರೆತಿದ್ದು, ಒಂದು ಕುಟುಂಬದವರAತೆ ಕೆಲಸ ಮಾಡಿz್ದೆÃನೆ. ಜೊತೆಗೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಸಹಕಾರ ಚನ್ನಾಗಿದ್ದರಿಂದ ಚುನಾವಣಾ ಕಾರ್ಯಗಳು ಸುಗಮವಾಗಿ ನಡೆಯಲು ಸಹಕಾರಿಯಾಯಿತು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಅಮೃತೇಶ್ ಚನ್ನಕೇಶವ, ಸದಸ್ಯರಾದ ಅರುಣ್, ಲಕ್ಷö್ಮಣ, ಕಚೇರಿ ಅಧಿಕಾರಿ ರವಿ, ವ್ಯವಸ್ಥಾಪಕ ರಮೇಶ್‌ನಾಯ್ಡು, ಲೋಕೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net