

ಮಂಗಳೂರು: ನಗರದ ಹೊರವಲಯದ ಮಂಗಳೂರು ಜಂಕ್ಷನ್ ಬಳಿ ಶುಕ್ರವಾರ ರಾತ್ರಿ ಸುಮಾರು 11 ಗಂಟೆಗೆ ಗೂಡ್ಸ್ ರೈಲೊಂದು ಹಳಿ ತಪ್ಪಿದೆ.
ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಇತರ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ತೊಂದರೆಯಾಗಿಲ್ಲ ಎಂದು ಇಲಾಖೆ ಮೂಲ ತಿಳಿಸಿದೆ.
ಅಪಘಾತ ನಿರ್ವಹಣೆ ರೈಲು ಮಂಗಳೂರು ಸೆಂಟ್ರಲ್‌ನಿಂದ ಘಟನೆ ನಡೆದ ಸ್ಥಳಕ್ಕೆ ತಲುಪಿದ್ದು, ಬಿದ್ದ ಬೋಗಿ ಮೇಲೆತ್ತುವ ಮತ್ತು ಹಳಿ ದುರಸ್ತಿ ಕಾಮಗಾರಿ ನಡೆಯುತ್ತಿದೆ.