ಗೂಡ್ಸ್​ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Crime Logo
Published on

ಹಾನಗಲ್ಲ: ಗೂಡ್ಸ್​ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಸುರಳೇಶ್ವರ ಕ್ರಾಸ್​ ಬಳಿ ಭಾನುವಾರ ನಡೆದಿದೆ.

ತಾಲೂಕಿನ ಬಾಳಂಬೀಡ ಗ್ರಾಮದ ಶಿವಪ್ಪ ನಿಂಗಪ್ಪ ಏರಿಮನಿ (49) ಮೃತ ವ್ಯಕ್ತಿ.

ಇವರು ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಹಿಂದಿನಿಂದ ಬಂದ ಗೂಡ್ಸ್​ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net