ಗೂಡ್ಸ್​ ಆಟೋಗೆ ಗುದ್ದಿದ ಲಾರಿ; ಕೆಳಗೆ ಬಿದ್ದ ಮಹಿಳೆ ಸ್ಥಳದಲ್ಲೇ ಸಾವು..

Accident
Published on

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ರಸ್ತೆ ಕಾಮಗಾರಿ ಮತ್ತು ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಂತಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಈ ಅಪಘಾತ ಸಂಭವಿಸಿದೆ.

ಪ್ರಮೀಳಾ (42) ಸಾವಿಗೀಡಾದ ಮಹಿಳೆ. ಗೂಡ್ಸ್​ ಲಾರಿ ಆಟೋಗೆ ಗುದ್ದಿದ ಪರಿಣಾಮವಾಗಿ ಕೆಳಗೆ ಬಿದ್ದ ಈಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಲ್ಲದೆ ಬಾಲಕಿ ಸೇರಿ ಮೂವರಿಗೆ ಗಾಯಗಳಾಗಿವೆ. ಎಲೆಕ್ಟ್ರಾನಿಕ್ ಸಿಟಿಇಯ ವೀರಸಂದ್ರ ಸಮೀಪ ಈ ಅಪಘಾತ ಸಂಭವಿಸಿದೆ.

ಮೆಲ್ಸೇತುವೆಯ ಇಳಿಜಾರಿನಲ್ಲಿ ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ನಡೆಯುತ್ತಿತ್ತು. ಇದೇ ವೇಳೆ ಲಾರಿ ಚಾಲಕನೂ ಅಜಾಗರೂಕತೆಯಲ್ಲಿ ವಾಹನ ಚಲಾಯಿಸಿಕೊಂಡು ಬಂದಿದ್ದೂ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net