ಗೂಡ್ಸ್ ವಾಹನ ಮಗುಚಿ ಆರು ಜನರಿಗೆ ಗಾಯ

14-GPT-5
Published on

ಗುಂಡ್ಲುಪೇಟೆ: ಪಟ್ಟಣದ ಹೊರವಲಯದಲ್ಲಿ ಗೂಡ್ಸ್ ವಾಹನ ಮಗುಚಿ ಬಿದ್ದ ಪರಿಣಾಮ ಆರು ಜನ ಕಾರ್ಮಿಕರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಪಟ್ಟಣದ ಸುಲ್ತಾನ್ ಭತ್ತೇರಿ ರಸ್ತೆಯಲ್ಲಿ ಶನಿವಾರ ಬೀಟ್‌ರೂಟ್ ಕೊಂಡೊಯ್ಯುತ್ತಿದ್ದ ತಾಲೂಕಿನ ಬನ್ನಿತಾಳಪುರ ಗ್ರಾಮದ ಕಾರ್ಮಿಕರಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. 6 ಕಾರ್ಮಿಕರಿಗೆ ಗಾಯಗಳಾಗಿದ್ದು ವಿಷಯ ತಿಳಿದ ಪೊಲೀಸರು ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net