

ಮಡಿಕೇರಿ: ನಗರದ ಗಾಂಧಿ ಭವನದಲ್ಲಿ ಭಾನುವಾರ ಜಿಲ್ಲಾಡಳಿತ ವತಿಯಿಂದ ಸದ್ಭಾವನಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಪ್ರತಿಜ್ಞಾ ವಿಧಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಯತೀಶ್ ಉಲ್ಲಾಳ್‌ರವರು ಬೋಧಿಸಿದರು. ವೈಯಕ್ತಿಕವಾಗಿ ಅಥವಾ ಸಾಮೂಹಿಕವಾಗಿ ಆಗಲಿ ಎಲ್ಲಾ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆಂದು ಪ್ರತಿಜ್ಞೆ ಮಾಡುತ್ತೇವೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸಿಇಒ ವರ್ಣಿತ್ ನೇಗಿ, ತಹಶೀಲ್ದಾರ್ ಪ್ರವೀಣ್ ಕುಮಾರ್, ಕೃಷಿ ಇಲಾಖೆಯ ಉಪ ನಿರ್ದೇಶಕ ಬಾಲರಾಜ್ ರಂಗರಾವ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು, ಮದೆ ಮಹದೇಶ್ವರ ಪಿಯು ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.