ಸದ್ಭಾವನಾ ದಿನ, ಪ್ರತಿಜ್ಞಾವಿಧಿ ಬೋಧನೆ

CTD 20 SADBHAVANA
Published on

ಚಿತ್ರದುರ್ಗ: ಸದ್ಭಾವನಾ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಪ್ರತಿಜ್ಞಾವಿಧಿ ಬೋಧಿಸಿದರು.

ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧ-ಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯನಿರ್ವಹಿಸುತ್ತೇನೆಂದು ಪ್ರತಿಜ್ಞೆ ಮಾಡಲಾಯಿತು.

ವೈಯಕ್ತಿಕ ಅಥವಾ ಸಾಮೂಹಿಕವಾಗಿ ನಮ್ಮಲ್ಲಿ ಬೇಧ-ಭಾವವಿದ್ದರೆ ಹಿಂಸಾಚಾರಕ್ಕೆ ಅವಕಾಶ ನೀಡದೆ, ಸಮಾಲೋಚನೆ ಅಥವಾ ಸಂವಿಧಾನಾತ್ಮಕವಾಗಿ ಪರಿಹರಿಸಿಕೊಳ್ಳುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಮಾತನಾಡಿ, ಎಲ್ಲ ಜಾತಿ, ಧರ್ಮ, ಭಾಷೆ ಹಾಗೂ ರಾಜ್ಯದ ಜನರಲ್ಲಿ ಸೌಹಾರ್ದತೆ ಉತ್ತೇಜಿಸಿ, ಎಲ್ಲರಲ್ಲೂ ಸದ್ಭಾವನೆ ಮೂಡಿಸಿ, ಹಿಂಸೆ ತ್ಯಜಿಸುವುದು ಈ ಆಚರಣೆಯ ಮೂಲ ಆಶಯ ಎಂದರು.

ಜಿಲ್ಲಾಧಿಕಾರಿ ಕಚೇರಿ, ಆಹಾರ ಮತ್ತು ನಾಗರಿಕ ಸರಬರಾಜು, ಸಣ್ಣ ಉಳಿತಾಯ, ಭೂ ದಾಖಲೆಗಳ, ವಾರ್ತಾ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಉಪವಿಭಾಗಾಧಿಕಾರಿ ಕಚೇರಿ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net