

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರು ರೌಡಿ ಶೀಟರ್ ವಿರುದ್ಧ ಮಂಗಳೂರು ನಗರ ಪೊಲೀಸ್ ಕಮಿಷನರ್ ಗೂಂಡಾ ಕಾಯ್ದೆ ಹೇರಿದ್ದಾರೆ.
ಧೀರಜ್ ಜಲ್ಲಿಗುಡ್ಡೆ ಮತ್ತು ಪ್ರೀತಂ ಅಳಪೆ ವಿರುದ್ಧ ಗೂಂಡಾ ಕಾಯ್ದೆ ಜಾರಿ ಮಾಡಿದ್ದಾರೆ. ಇಬ್ಬರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ತಲಾ 12 ಪ್ರಕರಣ ದಾಖಲಾಗಿದೆ.
ಕೊಲೆ ಯತ್ನ, ದರೋಡೆ, ಗಾಂಜಾ ಸೇವನೆ ಮೊದಲಾದ ಪ್ರಕರಣಗಳಿವೆ ಎಂದು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.