ನಾಳೆ ಅಽಕಾರಿಗಳ ಜತೆ ಗೋಪಾಲಕೃಷ್ಣ ಬೇಳೂರು ಸಭೆ

belur gopal (1)
ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು
Published on

ಸಾಗರ: ಮಳೆಹಾನಿ ಕುರಿತು ಭಾನುವಾರ `ವಿಜಯವಾಣಿ' ಜತೆ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ಸೋಮವಾರ ಅಽಕಾರಿಗಳ ಜತೆಯಲ್ಲಿ ತುರ್ತು ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಸಾಗರ, ಆನಂದಪುರ ಭಾಗದಲ್ಲಿ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು ಓಡಾಟಕ್ಕೆ ತೀವ್ರ ಸಮಸ್ಯೆ ಆಗಿದೆ. ಅಽಕಾರಿಗಳಿಗೆ ತುರ್ತು ಕಾಮಗಾರಿ ಕೈಗೊಳ್ಳಲು ಸೂಚಿಸಿದ್ದೇನೆ. ತಕ್ಷಣಕ್ಕೆ ಹೊಂಡ ಮುಚ್ಚುವ ಕೆಲಸ ನಡೆಯುತ್ತಿದೆ. ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಸಾರ್ವಜನಿಕರ ಆಸ್ತಿಗೆ ತೀವ್ರ ಹಾನಿಯುಂಟಾಗಿದೆ. ಅಡಕೆ ತೋಟಗಳಲ್ಲೂ ಮರಗಳು ನೆಲಕ್ಕುರುಳಿವೆ. ಯಾವುದೇ ಅಽಕಾರಿಗಳು ರಜೆ ಹಾಕದೆ ತಮಗೆ ಸೂಚಿಸಿರುವ ಸ್ಥಳದಲ್ಲಿ ಹಾಜರಿದ್ದು ತುರ್ತುಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅಂತಹ ಅಽಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಪರಿಹಾರವನ್ನು ಕೂಡ ಶೀಘ್ರ ವಿತರಿಸುವಂತೆ ಸೂಚಿಸಿದ್ದೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net