ಗೋಪಾಲಪುರ ಗ್ರಾಪಂ ಜೆಡಿಎಸ್ ತೆಕ್ಕೆಗೆ: ಸವಿತಾ ಅಧ್ಯಕ್ಷೆ, ಕೆಂಪಚಾರಿ ಉಪಾಧ್ಯಕ್ಷರಾಗಿ ಆಯ್ಕೆ

1 (2)
Published on

ಮಂಡ್ಯ: ತಾಲೂಕಿನ ಗೋಪಾಲಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಸವಿತಾ ಹಾಗೂ ಉಪಾಧ್ಯಕ್ಷರಾಗಿ ಕೆಂಪಚಾರಿ ಅವಿರೋಧವಾಗಿ ಆಯ್ಕೆಯಾದರು.

ಗ್ರಾಪಂ ಕಚೇರಿಯಲ್ಲಿ ಶುಕ್ರವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸವಿತಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೆಂಪಚಾರಿ ಹೊರತುಪಡಿಸಿ ಮತ್ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯೂ ಆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್‌ಕುಮಾರ್ ಆಯ್ಕೆ ಘೋಷಿಸಿದರು.

ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದ ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಮಾತನಾಡಿ, ಎಲ್ಲರ ಒಗ್ಗಟ್ಟಿನಿಂದ ಗ್ರಾಮಸ್ಥರು ಸಹಕಾರದಿಂದ ಗ್ರಾಮದ ಅಭಿವೃದ್ಧಿ ಮಾಡಬೇಕು. ಎರಡನೇ ಬಾರಿಯೂ ಜೆಡಿಎಸ್‌ನವರೇ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸದ ವಿಷಯ ಎಂದರು. ಸದಸ್ಯರಾದ ಜ್ಯೋತಿ, ಕವಿತಾ, ಸುಧಾ, ನಾಗರಾಜು, ಪುಟ್ಟಮ್ಮ, ಮುಖಂಡರಾದ ಸಿದ್ದರಾಜು ಮಾರ್ಕೆಟ್, ಬೋರಪ್ಪ, ಸೂಗಪ್ಪ ರಘು, ಭಾನುಪ್ರಕಾಶ್, ವೆಂಕಟೇಶ್, ಅಭಿಷೇಕ್, ಮೋಹನ್, ಅರುಣ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net