

ಮಂಡ್ಯ: ತಾಲೂಕಿನ ಗೋಪಾಲಪುರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ನಾಗರಾಜು ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಅಧ್ಯಕ್ಷೆ ಸುಧಾ ಸಿದ್ದೇಗೌಡ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. 8 ಸದಸ್ಯ ಬಲದ ಗ್ರಾಪಂನ ಅಧ್ಯಕ್ಷ ಸ್ಥಾನಕ್ಕೆ ನಾಗರಾಜು ಹೊರತುಪಡಿಸಿ ಮತ್ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿಯಾದ ಶಿಕ್ಷಣ ಇಲಾಖೆಯ ಗೋಪಾಲೇ ಅವಿರೋಧದ ಆಯ್ಕೆಯನ್ನು ಪ್ರಕಟಿಸಿದರು.
ನೂತನ ಅಧ್ಯಕ್ಷರನ್ನು ಅಭಿನಂದಿಸಿದ ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ಪಡೆದು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ ಎಂದು ಸಲಹೆ ನೀಡಿದರು. ಉಪಾಧ್ಯಕ್ಷೆ ಜ್ಯೋತಿ, ಸದಸ್ಯರಾದ ಪುಟ್ಟಮ್ಮ, ಕೆಂಪಚಾರಿ, ಸವಿತಾ, ಕವಿತಾ, ರವಿ ಇತರರಿದ್ದರು.