ಏ.7 ರಂದು ‘ಗೋರ್‌ಮಾಟಿ’ ನಾಟಕ ಪ್ರದರ್ಶನ

Drama-games
Published on

ರಂಗಾಯಣ ಅಂಗಳದ ಭೂಮಿಗೀತ ರಂಗವೇದಿಕೆಯಲ್ಲಿ ಏ.7 ರಂದು ಸಂಜೆ 6.30ಕ್ಕೆ ಬಂಜಾರ ಸಮುದಾಯದ ಅಸ್ಮಿತೆಯ ಕಾವ್ಯಕಥನ ‘ಗೋರ್‌ಮಾಟಿ’ ನಾಟಕ ಪ್ರದರ್ಶನಗೊಳ್ಳಲಿದೆ.

ರಂಗಕರ್ಮಿ ಸಿ.ಬಸವಲಿಂಗಯ್ಯ ಅವರ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ರಂಗಾಯಣ ಕಲಾವಿದರು ಪ್ರಸ್ತುತಪಡಿಸಲಿದ್ದಾರೆ. ಬಂಜಾರ ಜನಾಂಗದ ಸಂತೋಷ, ಸುಖ-ದುಃಖ, ಚರಿತ್ರೆಯಲ್ಲಿ ಇವರ ಬದುಕು ಹೇಗೆ ದುರಂತಮಯವಾಗಿದೆ ಎಂಬುದನ್ನು ನಾಟಕ ರೂಪದಲ್ಲಿ ಕಟ್ಟಿಕೊಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net