ಗೋವು ಅಕ್ರಮ ಸಾಗಣೆಗೆ ಕಡಿವಾಣ ಹಾಕಿ

0102
Published on

ಬೆಳಗಾವಿ: ಜಿಲ್ಲೆಯಲ್ಲಿನ ಗೋವುಗಳ ಅಕ್ರಮ ಸಾಗಣೆ ಮತ್ತು ಹತ್ಯೆ ತಡೆಯುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟಿಸಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಕಳೆದ ಹಲವು ತಿಂಗಳಿಂದ ಗೋವುಗಳ ಅಕ್ರಮ ಸಾಗಣೆ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದೆ. ಮತ್ತೊಂದೆಡೆ ಗೋವುಗಳನ್ನು ಹತ್ಯೆ ಮಾಡಿ ಮಾಂಸ ಸಾಗಣೆ ಮಾಡಲಾಗುತ್ತಿದೆ.

ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ದೊಡ್ಡ ಜಾಲವೇ ಈ ಕೃತ್ಯದಲ್ಲಿ ತೊಡಗಿದೆ. ಇದರಿಂದ ಗೋವುಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಹಾಗಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಜಿಲ್ಲೆಯ ವಿವಿಧೆಡೆ ಅಕ್ರಮವಾಗಿ ಗೋವುಗಳ ಮಾಂಸ ಸಾಗಣೆ ಮಾಡುತ್ತಿರುವ ವಾಹನ ಪತ್ತೆ ಹಚ್ಚಿ ಪೊಲೀಸರ ವಶಕ್ಕೆ ನೀಡಲಾಗಿದೆ. ಆದರೆ, ಇಲ್ಲಿಯವರೆಗೆ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳ ಬೆಂಬಲ ದಿಂದಲೇ ಕೆಲವರು ಬಹಿರಂಗವಾಗಿ ಗೋವುಗಳನ್ನು ಸಾಗಣೆ ಮಾಡುತ್ತಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದರು. ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳ ಮುಖಂಡರಾದ ಸತೀಶ್ ಎಂ., ಆನಂದ ಕರಲಿಂಗಣ್ಣವರ,
ಅರ್ಜುನ ಸಿಂಗ್ ರಜಪೂತ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net