

ಮಂಗಳೂರು : ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಡಿ.5ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆ ಹಿನ್ನಲೆಯಲ್ಲಿ ಗುರವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಭಗವಾನ್ ಸೋನಾವಣೆ, ಸಹಾಯಕ ಆಯುಕ್ತ ಮದನ್ ಮೋಹನ್ ಸೇರಿದಂತೆ ಜಿಲ್ಲಾಡಳಿತ ಹಿರಿಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು. ಧರ್ಮಸ್ಥಳದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದರು.