ಕುದ್ರೋಳಿ‌ಯಲ್ಲಿ ದೇವರ ದರ್ಶನ ಪಡೆದ ರಾಜ್ಯಪಾಲ ಥಾವರಚಂದ್ ಗೆಹ್ಲೋತ್‌

IMG-20220314-WA0015
Published on

ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್‌ ಸೋಮವಾರ ನಗರದ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ಪೋಲಿಸ್ ಆಯುಕ್ತ ಶಶಿಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಡಿಸಿಪಿ ಹರಿರಾಂ ಶಂಕರ್ ಹಾಗೂ ಇತರೆ ಅಧಿಕಾರಿಗಳು, ದೇವಸ್ಥಾನದ ಅಧ್ಯಕ್ಷರಾದ ಸಾಯಿರಾಂ, ಕಾರ್ಯದರ್ಶಿ ಮಾಧವ ಸುವರ್ಣ ಮೊದಲಾದವರಿದ್ದರು.
ಇದಕ್ಕೂ ಮೊದಲು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಶಿಷ್ಟಾಚಾರದಂತೆ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ, ಪೋಲಿಸ್ ಆಯುಕ್ತ ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net