ಆಶಾ ಮೇಲ್ವಿಚಾರಕರನ್ನು ಕೈಬಿಟ್ಟ ಸರ್ಕಾರ

Published on

ಬೈಂದೂರು: ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಆಶಾ ಮೇಲ್ವಿಚಾರಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶಿಸಿರುವ ಸರ್ಕಾರದ ನಿರ್ಧಾರ ವಿರುದ್ಧ ಶಾಸಕ ಗುರುರಾಜ್ ಗಂಟಿಹೊಳೆ ಪತ್ರದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 195 ಮಂದಿ ಆಶಾ ಮೇಲ್ವಿಚಾರಕರಿದ್ದು, ಕಳೆದ 17 ವರ್ಷದಿಂದ ಒಂದೇ ಹುದ್ದೆಯಲ್ಲಿ ಅತಿ ಕಡಿಮೆ ಸಂಬಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈಗ ಏಕಾಏಕಿ ಕರ್ತವ್ಯದಿಂದ ಬಿಡುಗಡೆಗೊಳಿಸಲು ಆದೇಶವಾಗಿದೆ. ಇದರಿಂದಾಗಿ ಉದ್ಯೋಗ ಕಳೆದುಕೊಂಡು ಮುಂದಿನ ಭವಿಷ್ಯದ ಬಗ್ಗೆ ಆತಂಕಗೊಂಡಿದ್ದಾರೆ. ಆಶಾ ಮೇಲ್ವಿಚಾರಕರನ್ನು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿಯೇ ಮುಂದುವರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಪತ್ರ ಬರೆದು ಶಾಸಕ ಗುರುರಾಜ್ ಗಂಟಿಹೊಳೆ ಆಗಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net