ಸೆ.21ರಿಂದ ಸರ್ಕಾರದ ವಿರುದ್ಧ ಹೋರಾಟ; ಬಳ್ಳಾರಿಯಲ್ಲಿ ಆಶಾ ಕಾರ್ಯಕರ್ತೆಯರ ಸಂಘ ಎಚ್ಚರಿಕೆ

D Nagalakshmi Asha Workers State Secretary
ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ.
Published on

ಬಳ್ಳಾರಿ: ವೇತನ ಹೆಚ್ಚಳ ಭರವಸೆ ಹುಸಿಯಾದ ಹಿನ್ನೆಲೆಯಲ್ಲಿ ಸೆ.21ರಿಂದ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದರು.

ಜುಲೈನಲ್ಲಿ 20 ದಿನಗಳ ಧರಣಿ ಹಮ್ಮಿಕೊಂಡಾಗ ಸರ್ಕಾರ ನೀಡಿದ್ದ ವೇತನ ಹೆಚ್ಚಳ ಭರವಸೆ ಇದುವರೆಗೂ ಈಡೇರಿಲ್ಲ. ಶ್ರಮಕ್ಕೆ ಪೂರಕವಾಗಿ ಆಶಾ ಕಾರ್ಯಕರ್ತೆಯರಿಗೆ ವೇತನ ಸಿಗುತ್ತಿಲ್ಲ. ಮಾಸಿಕ 12 ಸಾವಿರ ರೂ. ವೇತನ ನೀಡಿದರೆ ಸರ್ಕಾರಕ್ಕೆ ಹೊರೆಯಾಗುವುದಿಲ್ಲ. ಮಾಸಿಕ ಮೂರು ಸಾವಿರ ರೂ. ಕೋವಿಡ್ ಪ್ರೋತ್ಸಾಹ ಧನ ಇನ್ನೂ ಅನೇಕ ಆಶಾ ಕಾರ್ಯಕರ್ತೆಯರಿಗೆ ತಲುಪಿಲ್ಲ. ಬಾಕಿ ಪ್ರೋತ್ಸಾಹ ಧನ ನೀಡಲು ಕೂಡ ಕ್ರಮಕೈಗೊಳ್ಳಬೇಕು. ರಾಜ್ಯದ ಎಲ್ಲ ಶಾಸಕರು, ಸಂಸದರಿಗೆ ಮನವಿ ಸಲ್ಲಿಸಿ ಆಶಾ ಕಾರ್ಯಕರ್ತೆಯರ ಪರ ಸದನದಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಲಾಗುವುದು ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಸಂಘದ ಉಪಾಧ್ಯಕ್ಷ ಎ.ದೇವದಾಸ, ಜಿಲ್ಲಾ ಗೌರವ ಅಧ್ಯಕ್ಷೆ ಎ.ಶಾಂತಾ, ನಗರ ಘಟಕದ ಅಧ್ಯಕ್ಷೆ ರಾಮಕ್ಕ, ಕಾರ್ಯದರ್ಶಿ ರೇಷ್ಮಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net